ಗಣಪತಿ ವಿಸರ್ಜನೆಗೆ ಮುಸ್ಲಿಮರಿಂದ ಅಡ್ಡಿ ಖಂಡಿಸಿ ಪ್ರತಿಭಟನೆ

ಹೊಸದಿಗಂತ ವರದಿ ದಾವಣಗೆರೆ:

ಗಣಪತಿ ಬೀಳ್ಕೊಡುಗೆ ಮೆರವಣಿಗೆಗೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದ್ದನ್ನು ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಜಯದೇವ ವೃತ್ತದಲ್ಲಿ ಜಮಾಯಿಸಿದ್ದ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಷ ವ್ಯಕ್ತಪಡಿಸಿದರು.

ಇದೇ ವೇಳೆ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಮಾತನಾಡಿ, ದಾವಣಗೆರೆ ನಗರದಲ್ಲಿ ಹಿಂದೂ ಹಾಗೂ ಮುಸ್ಲಿಂ ಬಾಂಧವರು ಪರಸ್ಪರರ ಹಬ್ಬಗಳನ್ನು ಶಾಂತಿ, ಸೌಹಾರ್ಧದಿಂದ ಆಚರಿಸುತ್ತಾ ಬಂದಿದ್ದೇವೆ. ಹಿಂದೂ ಜನವಸತಿ ಇರುವ ಪ್ರದೇಶಗಳಲ್ಲಿ ಮುಸ್ಲಿಮರ ಹಬ್ಬ ಆಚರಣೆಗೆ ಹಾಗೂ ಬ್ಯಾನರ್, ಬಂಟಿಂಗ್ಸ್ ಕಟ್ಟಲು ಅವಕಾಶ ನೀಡುತ್ತಿದ್ದೇವೆ. ಅದರೆ ಮುಸ್ಲಿಂ ಏರಿಯಾಗಳಲ್ಲಿ ಗಣಪತಿ ಮೆರವಣಿಗೆ ಹೋಗಬಾರದು ಅನ್ನೋದಕ್ಕೆ ಇದೇನು ತಾಲಿಬಾನ್ ಅಥವಾ ಪಾಕಿಸ್ತಾನವಾ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂ ತುಷ್ಟೀಕರಣ ಹೆಚ್ಚಾಗಿದೆ. ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರ ಓಲೈಕೆ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ. ಇದೇ ರೀತಿ ಮುಂದುವರೆದರೆ ಹಿಂದೂಗಳು ಕಾನೂನು ಕೈಗೆ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಅವರು ಎಚ್ಚರಿಸಿದರು.

ಸಂಘಟನೆಗಳ ಮುಖಂಡರಾದ ಧೂಡಾ ಮಾಜಿ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಾಜಿ ಮೇಯರ್ ಬಿ.ಜಿ.ಅಜಯ ಕುಮಾರ, ಶ್ರೀನಿವಾಸ ದಾಸಕರಿಯಪ್ಪ, ಎಸ್.ಟಿ.ವೀರೇಶ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!