Sunday, February 28, 2021

Latest Posts

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಇಳಿಸಲು ಆಗ್ರಹಿಸಿ ಪ್ರತಿಭಟನೆ

ಹೊಸ ದಿಗಂತ ವರದಿ, ಮೈಸೂರು:

ಪೆಟ್ರೋಲ್- ಡೀಸೆಲ್ -ಅಡುಗೆ ಅನಿಲ ದರ ಏರಿಕೆಗೆ ಕಡಿವಾಣ ಹಾಕಿ, ಏರಿಸಿರುವ ದರವನ್ನು ಕೂಡಲೇ ಇಳಿಸಬೇಕೆಂದು ಆಗ್ರಹಿಸಿ ಮಂಗಳವಾರ ನಗರದಲ್ಲಿ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಇಡೀ ಮನುಕುಲವೇ ಕೋವಿಡ್ ನಂತಹ ಮಹಾಮಾರಿಯ ಸಂಕಷ್ಟದಿAದ ನೊಂದು ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಡೀಸೆಲ್-ಪೆಟ್ರೋಲ್ ಹಾಗೂ ಅಡುಗೆ ಅನಿಲಗಳ ಬೆಲೆಯನ್ನು ನಿರಂತರವಾಗಿ ಏರಿಸುತ್ತಲೇ ಇದೆ. ಇವುಗಳ ದರ ಸತತ ಏರಿಕೆಯಿಂದಾಗಿ ಜನಸಾಮಾನ್ಯರು ಬಡವರು, ಮಧ್ಯಮವರ್ಗದವರು ಕೂಲಿಕಾರ್ಮಿಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಛಾಯಾಗ್ರಾಹಕರು, ಬೀದಿ ಬದಿ ವ್ಯಾಪಾರಿಗಳು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ದೈನಂದಿನ ಜೀವನವನ್ನು ನಡೆಸುವುದೇ ಕಷ್ಟಕರವಾಗಿದೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಗನ ಮುಟ್ಟಿವೆ. ಅದರೊಂದಿಗೆ ಡೀಸೆಲ್ ಪೆಟ್ರೋಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆಯಿಂದಾಗಿ ಇನ್ನೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಆದಾಯ ಕುಂಠಿತವಾಗಿರುವ ಸಂದರ್ಭದಲ್ಲಿ ಖರ್ಚು ದುಬಾರಿಯಾಗುತ್ತಿದೆ. ಜನ ಸಮಾನ್ಯರ ಸಂಕಷ್ಟಗಳನ್ನು ಅರಿಯದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಈ ವರ್ತನೆಯನ್ನು ಜನನಾಯಕರು ಪ್ರಶ್ನಿಸದಂತಾಗಿದೆ. ಈ ವರ್ತನೆಯನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಜನರ ಸಂಕಷ್ಟಗಳನ್ನು ಅರಿತು, ಅವರ ಜೀವನ ಚೇತರಿಸಿಕೊಳ್ಳುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಡೀಸೆಲ್, ಪೆಟ್ರೋಲ್ ಹಾಗೂ ಅಡುಗೆ ಅನಿಲಗಳ ಬೆಲೆಗಳನ್ನು ಕಡಿಮೆ ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಳಗದ ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ಸತೀಶ್ ಕುಮಾರ್, ಸಂಸ್ಥಾಪಕ ಅಧ್ಯಕ್ಷ ಡಿ.ಪಿ.ಕೆ.ಪರಮೇಶ್, ಮಹಿಳಾ ಅಧ್ಯಕ್ಷೆ ಯಶೋಧ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!