ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ದಿಗಂತ ವರದಿ ಮಡಿಕೇರಿ :
ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪ್ರಮುಖರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಳೆದ ಒಂದು ತಿಂಗಳ ಅವಧಿಯಲ್ಲಿ 20 ಬಾರಿ ತೈಲೋತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾತನಾಡಿ, ಕೇಂದ್ರ ಸರ್ಕಾರ ನಿರಂತರವಾಗಿ ಜನ ವಿರೋಧಿ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಟೀಕಿಸಿದರಲ್ಲದೆ, ಹೋರಾಟದ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಕಾಂಗ್ರೆಸ್ ಇನ್ನು ಮುಂದೆಯೂ ಮಾಡಲಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ಪಕ್ಷದ ಪ್ರಮುಖರಾದ ಟಿ.ಪಿ.ರಮೇಶ್, ಟಿ.ಎಂ.ಶಾಹಿದ್, ಐ.ಜಿ.ಚಿಣ್ಣಪ್ಪ, ಸುಜು ತಿಮ್ಮಯ್ಯ, ಬಿ.ವೈ.ರಾಜೇಶ್,ಎಂ.ಎ.ಉಸ್ಮಾನ್, ಸೂರಜ್ ಹೊಸೂರು,ಕೆ.ಯು.ಅಬ್ದುಲ್ ರಜಾಕ್, ಚುಮ್ಮಿ ದೇವಯ್ಯ, ಪ್ರಕಾಶ್ ಆಚಾರ್ಯ, ಚಂದ್ರಶೇಖರ್ ಆರ್.ಪಿ,ಅಂಬೇಕಲ್ ನವೀನ್ ಕುಶಾಲಪ್ಪ, ಹನೀಫ್ ಸಂಪಾಜೆ, ಶಾಫಿ ಕೊಟ್ಟಮುಡಿ, ಇಸ್ಮಾಯಿಲ್,ಮುನೀರ್ ಅಹಮ್ಮದ್ ಎಸ್.ಐ, ತೆನ್ನಿರ ಮೈನಾ, ಪ್ರಭು ರೈ, ನಂದಿನೆರವಂಡ ಮಧು, ತಮ್ಮಯ್ಯ ವೈ.ಪಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.