ಕುಸ್ತಿ ಫೆಡರೇಷನ್‌ ಅಧ್ಯಕ್ಷ ವಿರುದ್ಧ ಪ್ರತಿಭಟನೆ: ಬೆಂಬಲಕ್ಕೆ ರಾಜಕೀಯ ಪಕ್ಷಗಳಿಗೆ ಕರೆಕೊಟ್ಟ ಕುಸ್ತಿಪಟುಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷ ಬ್ರಿಜ್ಭೂಷಣ್‌ ಶಂಕರ್‌ ಸಿಂಗ್‌ (Brij Bhushan Sharan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದು, . ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಯಾವುದೇ ಪಕ್ಷವನ್ನು ನಾವು ಸ್ವಾಗತಿಸುತ್ತೇವೆ ಎಂದು ಭಾರತೀಯ ಕುಸ್ತಿಪಟುಗಳು (Wrestlers Protest) ಕರೆ ಕೊಟ್ಟಿದ್ದಾರೆ.

ಜನವರಿಯಲ್ಲಿ ಬಜರಂಗ್ ಪುನಿಯಾ (Bajrang Punia), ವಿನೇಶ್ ಫೋಗಟ್ (Vinesh Phogat), ರವಿ ದಹಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ದುರ್ನಡತೆಯ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ಸಿಕ್ಕ ಬಳಿಕ ಪ್ರತಿಭಟನೆ ಹಿಂಪಡೆದಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಆಗದಿರುವ ಕಾರಣ ಕುಸ್ತಿಪಟುಗಳು ಮತ್ತೆ ಅಖಾಡಕ್ಕಿಳಿದಿದ್ದಾರೆ. ಅಲ್ಲದೇ ತಮ್ಮ ಹೋರಾಟಕ್ಕೆ ರಾಜಕೀಯ ಪಕ್ಷಗಳ ಬೆಂಬಲವನ್ನೂ ಕೋರಿದ್ದಾರೆ.

ಜನವರಿಯಲ್ಲಿ ಹೋರಾಟಕ್ಕೆ ಬೆಂಬಲ ಸೂಚಿಸಲು ಬಂದಿದ್ದ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ ಅವರನ್ನು ವಾಪಸ್‌ ಕಳುಹಿಸಲಾಗಿತ್ತು. ಇದು ಕ್ರೀಡಾಪಟುಗಳ ಹೋರಾಟ. ಇದರಲ್ಲಿ ರಾಜಕೀಯ ಮಾಡಬೇಡಿಎಂದು ನಿರ್ಬಂಧ ಹಾಕಿದ್ದರು.
ಇದೀಗ ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಿಕೊಳ್ಳಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ ಅಥವಾ ಇನ್ಯಾವುದೇ ಪಕ್ಷವಾಗಲಿ.. ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೂ ಸ್ವಾಗತವಿದೆ ಎಂದು ಕುಸ್ತಿಪಟುಗಳು ಆಹ್ವಾನಿಸಿದ್ದಾರೆ.

ಕುಸ್ತಿಪಟುಗಳು ಪ್ರತಿಭಟನಾ ಸ್ಥಳದಲ್ಲೇ ರಾತ್ರಿಯನ್ನು ಕಳೆದಿರುವ ಸಂಬಂಧದ ಫೋಟೋಗಳನ್ನು ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!