Tuesday, August 16, 2022

Latest Posts

ಉದಯಪುರ ಹಿಂದೂ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸದಿಗಂತ ವರದಿ ಬೀದರ್: 

ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ನಡೆದ ಕನ್ಹಯ್ಯ ಲಾಲ್‌ ಭೀಕರ ಹತ್ಯೆ ಖಂಡಿಸಿ ಬೀದರ್‌ನಲ್ಲಿ ಪ್ರತಿಭಟನೆ ನಡೆದಿದೆ.  ದುಷ್ಕರ್ಮಿಗಳನ್ನು ಗಲ್ಲಿಗೇರಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗ ದಳ ಸೇರಿದಂತೆ ಹಿಂದುಪರ ಸಂಘಟಗಳ ವತಿಯಿಂದ ಇಂದು ಬೀದರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾಕಾರರು ಮೆರವಣಿಗೆಯುದ್ದಕ್ಕೂ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಪೈಶಾಚಿಕ ಕೃತ್ಯ ಎಸೆಗಿದ ಉಗ್ರವಾದಿಗಳನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು. ಈ ಬೃಹತ್ ಪ್ರತಿಭಟನೆಯಲ್ಲಿ ಹಿಂದುಪರ ಸಂಘಟನೆಗಳ ಜಿಲ್ಲಾ ಪ್ರಮುಖರು, ನೂರಾರು ಕಾರ್ಯಕರ್ತರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss