ಇರಾನ್ ನಲ್ಲಿ ಭುಗಿಲೆದ್ದ ಪ್ರತಿಭಟನೆ: ಪೊಲೀಸರ ಗುಂಡೇಟಿಗೆ 9 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಹಿಜಾಬ್ ಧರಿಸದ ಕಾರಣಕ್ಕೆ ಪೊಲೀಸರ ಬಂಧನಕ್ಕೆ ಒಳಗಾಗಿ ಯುವತಿ ಮೃತಪಟ್ಟ ಘಟನೆ ವಿರೋಧಿಸಿ ಇರಾನ್ ನಲ್ಲಿಭಾರೀ ಪ್ರತಿಭಟನೆ ನಡೆಯುತ್ತಿದ್ದು, ಏಳನೆ ದಿನಕ್ಕೆ ಕಾಲಿಟ್ಟಿದೆ.

ಇರಾನ್ ಭದ್ರತಾ ಪಡೆಗಳು ಮತ್ತು ಪೊಲೀಸ್ ಕಸ್ಟಡಿಯಲ್ಲಿದ್ದ 22 ವರ್ಷದ ಮಹಿಳೆಯ ಸಾವಿನಿಂದ ಕೋಪಗೊಂಡ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ವಾರಾಂತ್ಯದಲ್ಲಿ ಹಿಂಸಾಚಾರವಾಗಿ ರೂಪ ಪಡೆದಿದ್ದು, ಕನಿಷ್ಠ 9 ಮಂದಿ ಜನರು ಸಾವನ್ನಪ್ಪಿದ್ದಾರೆ.

ಸತತ ಏಳನೆ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು ಇರಾನ್‍ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರು ಪ್ರತಿಭಟನೆ ಮುಂದುವರೆಸಿದ್ದಾರೆ. ಸಾವಿರಾರು ಮಹಿಳೆಯರು ಬೀದಿಗಿಳಿದು ಹಗಲು ರಾತ್ರಿ ಎನ್ನದೇ ಕೆರ್ಮಾನ್‍ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಾಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ.

ಯುವತಿಯ ಸಾವಿಗೆ ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ವಿಶ್ವಸಂಸ್ಥೆಯಿಂದ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಆಕೆ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಆಕೆಯನ್ನು ನಾವು ಕೆಟ್ಟದಾಗಿ ನಡೆಸಿಕೊಳ್ಳಲಿಲ್ಲ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಆಕೆಯ ಕುಟುಂಬ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ಸೇರಿದಂತೆ ಕನಿಷ್ಠ 13 ನಗರಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದೆ,ಪ್ರತಿಭಟನೆಯನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಮತ್ತು ಜಲ ಕ್ಯಾನನ್‌ಗಳನ್ನು ಹಾರಿಸುತ್ತಿರುವ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!