Sunday, August 14, 2022

Latest Posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಹೊಸ ದಿಗಂತ ವರದಿ, ಮೈಸೂರು:

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಳಿಕ ಜಿ.ಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಿದರು. ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕೋವಿಡ್ ಸುರಕ್ಷತಾ ಸಾಧನಗಳನ್ನು ಒದಗಿಸಿ, ಕೊರೋನಾ ಪರೀಕ್ಷೆ ಕಡ್ಡಾಯ ಮಾಡಬೇಕು, ಲಸಿಕೆಯನ್ನ ನಿರ್ಧಿಷ್ಟ ಕಾಲಮಿತಿಯೊಳಗೆ ನೀಡಬೇಕು. ಜಿಡಿಪಿಯ ಶೇ 6ರಷ್ಟು ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ಮೀಸಲಿಟ್ಟು, ಸಾರ್ವಜನಿಕ ಆರೋಗ್ಯವನ್ನು ಬಲಪಡಿಸಬೇಕು, ಯೋಜನೆಗಳ ಕೆಲಸಗಾರರಿಗೆ ಮಾಸಿಕ 10 ಕೆಜಿ ಆಹಾರ ಧಾನ್ಯಗಳನ್ನು ಕೊರೋನಾ ಅವಧಿಗೆ ನೀಡಬೇಕು, ದಿನಬಳಕೆಯ ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ತಡೆಗಟ್ಟಬೇಕು, ಎಸ್‌ಎಸ್‌ಎಲ್ ಸಿ, ಪದವಿ ಪಡೆದವರನ್ನು ಮೇಲ್ವಿಚಾರಕಿ ಹುದ್ದೆಗೆ ನೇಮಕ ಮಾಡಬೇಕು ಎಂಬುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss