ಹೊಸದಿಗಂತ ಡಿಜಿಟಲ್ ಡೆಸ್ಕ್:
ಐದು ಗ್ಯಾರಂಟಿ ಘೋಷಿಸಿದ ರಾಜ್ಯ ಕಾಂಗ್ರೆಸ್ ಸರಕಾರದ ಆರನೇ ಭರವಸೆ ದೊಡ್ಡ ತಲೆನೋವು ತಂದಿಟ್ಟಿದ್ದು, ಇಂದು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ.
ಐದು ಗ್ಯಾರಂಟಿಗಳನ್ನು ಹೇಗಾದರೂ ಮಾಡಿ ಜಾರಿ ಮಾಡಬೇಕು ಎಂದು ಹರಸಾಹಸಪಡುತ್ತಿರುವ ಸರ್ಕಾರಕ್ಕೆ ಈಗ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ ಹೆಚ್ಚಳ ಮಾಡುವುದಾಗಿ ಹೇಳಿದ್ದ ಭರವಸೆ ಈಡೇರಿಸಲು ಒತ್ತಾಯ ಕೇಳಿಬರುತ್ತಿದೆ.
ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಜ್ಜಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ (AITUC) ಈ ಪ್ರತಿಭಟನೆಗೆ ಕರೆ ನೀಡಿದೆ. ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.