Friday, June 2, 2023

Latest Posts

ಕಾಂಗ್ರೆಸ್ ಮುಖಂಡರ ಗೂಂಡಾವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ದಿಗಂತ ವರದಿ ವಿಜಯಪುರ:

ಕಾಂಗ್ರೆಸ್ ಮುಖಂಡರ ಗೂಂಡಾವರ್ತನೆ ಖಂಡಿಸಿ ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಹಾಗೂ ವಿಧಾನ ಪರಿಷತ್ ಸದಸ್ಯ ರವಿ ಗೂಂಡಾವರ್ತನೆ ಖಂಡಿಸಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು, ನಗರದ ಬಿಜೆಪಿ ಕಾರ್ಯಾಲಯದಿಂದ ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಕಾಂಗ್ರೆಸ್ ಕಚೇರಿ ವರೆಗೂ ಆಗಮಿಸಿ ಮುತ್ತಿಗೆ ಹಾಕಲು ಯತ್ನಿಸಿದ್ದು, ಇದೇ ವೇಳೆಯಲ್ಲಿ ಸಂಸದ ಡಿಕೆ ಸುರೇಶ ಹಾಗೂ ಎಂಎಲ್‌ಸಿ ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ, ಇದೇ ವೇಳೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!