ಹೊಸದಿಗಂತ ವರದಿ, ವಿಜಯಪುರ:
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನಡೆ ಖಂಡಿಸಿ ನಗರದಲ್ಲಿ ಬಿಜೆಪಿ ರೈತ ಮೋರ್ಚಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ, ರೈತರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆ ಹಿಡಿಯುತ್ತಿವೆ. ರೈತರ ಆತ್ಮಹತ್ಯೆ ತಡೆಗಟ್ಟಲು ಸರ್ಕಾರ ವಿಫಲವಾಗಿದೆ ಎಂದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಹೀಗಾಗಿ ರೈತರ ಯೋಜನೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಮುಖಂಡರಾದ ವಿಜುಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟ, ಉಮೇಶ ಕೋಳಕೂರ, ಭೀಮಾಶಂಕರ ಹದನೂರ, ವಿವೇಕಾನಂದ ಡಬ್ಬಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ, ವಿಜಯ ಜೋಶಿ ಮತ್ತಿತರರು ಇದ್ದರು.