ಮಂಡ್ಯದಲ್ಲಿ ಪೆಟ್ರೋಲ್-ಡೀಸೆಲ್ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ದಿಗಂತ ವರದಿ ಮಂಡ್ಯ :

ರಾಜ್ಯಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸ ಬಿಜೆಪಿ ಕಾರ‌್ಯಕರ್ತರು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ. ವೃತ್ತದಲ್ಲಿ ಜಮಾಯಿಸಿದ ಕಾರ‌್ಯಕರ್ತರು, ಬೈಕೊಂದಕ್ಕೆ ಹಗ್ಗ ಬಿಗಿದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಿಂಬಿಸುವಂತಹ ಅಣಕು ಪ್ರದರ್ಶನ ನೀಡಿ ವಿನೂತನ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದರು.

ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು, ವಾಹನ ಸವಾರರಿಗೆ ಹೂ ಕೊಟ್ಟು ಕಿವಿಗೆ ಹೂವಿಟ್ಟ ಸರ್ಕಾರದ ಕ್ರಮವನ್ನು ವಿರೋಧಿಸಿದರು.

ರಾಜ್ಯದ ಹಣಕಾಸು ಪರಿಸ್ಥಿತಿ ಹದಗೆಟ್ಟಿರುವುದಕ್ಕೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯೇ ಸಾಕ್ಷಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ರಾಜ್ಯ ಸರ್ಕಾರ ತೈಲ ಬೆಲೆಗಳನ್ನು ಏರಿಕೆ ಮಾಡಿದೆ ಎಂದು ದೂರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!