ವಕ್ಫ್‌ ಅಧಿಸೂಚನೆ ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಹೊಸದಿಗಂತ ಮಂಡ್ಯ :

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವಕ್ಫ್‌ ಮಂಡಳಿಯ ಮೂಲಕ ರೈತರನ್ನು ಆತಂಕದ ಸ್ಥಿತಿಗೆ ತಳ್ಳುತ್ತಿದ್ದು, ತಕ್ಷಣ 1974ರ ವಕ್ಫ್‌ ಅಧಿಸೂಚನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ ಕಾರ್ಯಕರ್ತರು ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ಜನತೆಯ ಹಿತದೃಷ್ಠಿಯಿಂದ ಹಾಗೂ ವಕ್ಪ್‌ ಮಂಡಳಿಯಲ್ಲಿ ಆಗುತ್ತಿರುವ ಕ್ರಮಗಳ ಹಿನ್ನೆಲೆಯಲ್ಲಿ ವಕ್ಫ್‌ ಕಾಯಿದೆಗೆ ತಿದ್ದುಪಡಿ ತರುವ ವಿಧೇಯಕವನ್ನು ಮಂಡಿಸಿ, ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್‌ ಬೋರ್ಡ್ ತನ್ನ ಕರಾಳ ಕೈಚಳಕವನ್ನು ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!