ದಿಲ್ಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ಆರಂಭ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಶಾಸಕರು ದಿಲ್ಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು ದೆಹಲಿಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ಹಾಗೂ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಅನುದಾನ ನೀಡಿಕೆಯಲ್ಲಿ ಅಸಮಾನತೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಬರುವಂತೆ ನಾವು ರಾಜ್ಯದ ಶಾಸಕರಿಗೂ ಪತ್ರ ಬರೆದಿದ್ದೇವೆ. ಇದೊಂದು ದೊಡ್ಡ ಆಂದೋಲನ. ನಾವು 4 ಲಕ್ಷ 30,000 ಕೋಟಿ ತೆರಿಗೆ ಕಟ್ಟುತ್ತೇವೆ. 100 ರೂಪಾಯಿ ತೆರಿಗೆ ಕಟ್ಟಿದರೆ ನಮಗೆ ಸಿಗುವುದು 12 ರೂಪಾಯಿ ಮಾತ್ರ. ಹಣಕಾಸು ಆಯೋಗದ ನಿರ್ಧಾರದ ಪ್ರಕಾರ ಹಣವನ್ನು ರಾಜ್ಯಗಳಿಗೆ ಲಭ್ಯವಾಗುವಂತೆ ಮಾಡಬೇಕು. ಆದರೆ ಹಣ ಬಿಡುಗಡೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!