ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಳೆ ಕೊಯಮತ್ತೂರ್‌ಗೆ ಭೇಟಿ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪ್ರತಿಭಟನೆ ನಡೆಸಲು ವಿವಿಧ ರಾಜಕೀಯ ಮತ್ತು ತಮಿಳು ಸಂಘಟನೆಗಳು ಯೋಜನೆಯನ್ನು ಘೋಷಿಸಿವೆ.
ಶಾ ಅವರು ಇಶಾ ಫೌಂಡೇಶನ್ ಯೋಗ ಕೇಂದ್ರದಲ್ಲಿ ಮಹಾಶಿವರಾತ್ರಿ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಮಿಳುನಾಡಿನಲ್ಲಿ ಹಿಂದಿ ಭಾಷೆಯನ್ನು ಹೇರುವ ಕೇಂದ್ರ ಸರ್ಕಾರದ ನಿಲುವು, ಶಿಕ್ಷಣ ನಿಧಿ ಬಿಡುಗಡೆಗೆ ನಿರಾಕರಿಸುವುದು ಮತ್ತು ರಾಜ್ಯದಲ್ಲಿ ವಿವಾದಾತ್ಮಕ ತ್ರಿಭಾಷಾ ನೀತಿಯನ್ನು ಪರಿಚಯಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಎನ್ನಲಾಗಿದೆ.
ಹೊಸ ಶಿಕ್ಷಣ ನೀತಿ ಮತ್ತು ಅದರ ತ್ರಿಭಾಷಾ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಮಿಳುನಾಡು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಕೆಲವು ಸಮಯದಿಂದ ವಿವಾದದ ಹಂತವಾಗಿದೆ. ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ತಮಿಳುನಾಡನ್ನು ನಿರ್ಲಕ್ಷಿಸುತ್ತಿದೆ ಮತ್ತು ಜನರ ಮೇಲೆ ಹಿಂದಿ ಹೇರಲು ಪ್ರಯತ್ನಿಸುತ್ತಿದೆ ಎಂದು ಪದೇ ಪದೇ ಆರೋಪಿಸಿದೆ. ಆದರೆ, ತಮಿಳುನಾಡಿನ ಮೇಲೆ ಹಿಂದಿ ಹೇರುವ ಪ್ರಯತ್ನ ಮಾಡುತ್ತಿಲ್ಲ, ತಮಿಳು ಭಾಷೆಯನ್ನು ಗೌರವಿಸುವುದಾಗಿ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.