ಪ್ರತಿಭಟನೆ ನೆಪದಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್: ಸಚಿವ ಬಿ.ಸಿ.ಪಾಟೀಲ್

ಹೊಸದಿಗಂತ ವರದಿ, ಹಾವೇರಿ :

ತಮ್ಮ ಸರ್ಕಾರಾದ ಅವಧಿಯಲ್ಲಿ ಮೇಕೆದಾಟು ಯೋಜನೆ ಕುರಿತು ಮಾತನಾಡದ ಕಾಂಗ್ರೆಸ್ ಈಗ ಮೇಕೆದಾಟು ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ರಾಜಕೀಯ ಮಾಡುವುದಕ್ಕೆ ಹೊರಟಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದರು.
ನಗರದ ಮುನ್ಸಿಪಲ್ ಹೈಸ್ಕೂಲಿನಲ್ಲಿ ೧೫ ರಿಂದ ೧೮ ವರ್ಷದವರಿಗೆ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿದ್ದರು, ಡಿ.ಕೆ.ಶಿವಕುಮಾರ ಅವರು ನೀರಾವರಿ ಸಚಿವರಾಗಿದ್ದರು. ಅಂದಾಜು ೭ ವರ್ಷಗಳ ಕಾಲ ಅವರು ಅಧಿಕಾರದಲ್ಲಿದ್ದರು ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಕುರಿತು ಯಾವ ನಿರ್ಧಾರಗಳನ್ನು ತಗೆದುಕೊಳ್ಳುವುದಿರಲಿ ಈ ಕುರಿತು ಅವರು ಸಮರ್ಪಕವಾದ ಮಾತುಗಳನ್ನು ಆಡಲಿಲ್ಲ. ಈಗ ಇಂತಹವರು ಮೇಕೆ ದಾಟು ಯೋಜನೆಯ ನೆಪವನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುವ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.
ಪರಿಸರ ಇಲಾಖೆಯಿಂದ ಅನುಮತಿ ದೊರೆತಕೂಡಲೇ ಬಿಜೆಪಿ ಸರ್ಕಾರ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುತ್ತದೆ ಎಂಬ ಮಾಸನೆ ದೊರೆತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರು ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಮುಂದಾಗುತ್ತಿದ್ದಾರೆ. ಇದು ಕಾಂಗ್ರೆಸ್ಸಿಗರ ರಾಜಕೀಯ ನಾಟಕವೇ ಹೊರತು ಅವರಲ್ಲಿ ಈ ಯೋಜನೆಕುರಿತು ನಿಜವಾದ ಕಳಕಳಿಯಿಲ್ಲ. ಹೊಟ್ಟೆಕಿಚ್ಚಿಗಾಗಿ ಈ ಯೋಜನೆಯನ್ನು ಬಿಜೆಪಿಯವರು ತಡೆಯುವುದಕ್ಕೆ ಮುಂದಾಗುತ್ತಿಲ್ಲ. ಅಂತಹ ಯೋಚನೆ ನಮ್ಮ ಸರ್ಕಾರಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಿಲ್ಲದಿದ್ದರೂ ನಮ್ಮ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಾಳಗಳಲ್ಲಿ ಒಮಿಕ್ರಾನ್ ಪ್ರಕರಣಗಳ ಜಾಸ್ತಿ ಆಗುತ್ತಿರುವಹಿನ್ನಲೆಯಲ್ಲಿ ನಾವು ಮೈಮರೆಯುವಂತಿಲ್ಲ ಎಂದು ಹೇಳಿದರು.
ಈಗ ನಾವು ಮೈಮರೆತರೆ ನಾವಾಗಿನೇ ಅ ಮೈಮೇಲೆ ತಗೆದುಕೊಂಡಂತೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಒಮಿಕ್ರಾನ್ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಲಾಕ್‌ಡೌನ್ ಕುರಿತು ವಿಚಾರ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುವುದು ಬೇಡ ಹಾಗೂ ಲಾಕ್‌ಡೌಲ್ ಮಾಡುವ ಪ್ರಸಂಗ ರಾಜ್ಯದಲ್ಲಿ ಬಾರದಿರಲಿ ಎಂದು ಆಶಿಸೋಣ ಎಂದರು.
ಕೊರೋನಾ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿದ್ದ ಸಮಯ ಲಾಕ್‌ಡೌನ್ ಮಾಡಿಲ್ಲ. ಹಾಗಂತ ಮೂರನೇ ಅಲೆಯಲ್ಲಿ ಜನತೆ ಮೈಮರೆಯಬಾರದು. ಮೂರನೆ ಅಲೆ ಬಾರದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಜನತೆ ತಗೆದುಕೊಳ್ಳುವ ಮೂಲಕ ಜನತೆ ಸರ್ಕಾರದೊಂದಿಗೆ ಸಹಕರಿಸಬೇಕೆಂದು ಕೇಳಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ ಹಾಗೂ ಇತರರಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!