ಚಂಡೀಗಢ ವಿವಿಯಲ್ಲಿ ಮುಂದುವರೆದ ಪ್ರತಿಭಟನೆ: ಅಧಿಕಾರಿಗಳು, ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಚಂಡೀಗಢ ವಿಶ್ವವಿದ್ಯಾಲಯದ ವಿಡಿಯೋ ವಿವಾದ ಮುಂದುವರಿದಿದೆ. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ಮುಂದುವರೆದಿದೆ. ರಾತ್ರಿ ಕೂಡಾ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ಮುಂದುವರಿದಿತ್ತು. ಈ ನಡುವೆ ಪಂಜಾಬ್ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ ಮತ್ತು ಇನ್ನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ವಿಡಿಯೋಗಳನ್ನು ಸ್ನೇಹಿತರಿಗೆ ಕಳುಹಿಸಿದ್ದ ಯುವತಿ ಹಾಗೂ ಆಕೆಯ ಪ್ರಿಯಕರನನ್ನೂ ಬಂಧಿಸಿದ್ದಾರೆ. ಇಬ್ಬರೂ ಶಿಮ್ಲಾದ ರೋಹ್ರು ಪ್ರದೇಶದವರು. ವಿವಿ ಸೋಮವಾರ ಮತ್ತು ಮಂಗಳವಾರ ರಜೆ ಘೋಷಿಸಿರುವುದಾಗು ವಿಸಿ ಆದೇಶ ಹೊರಡಿಸಿದ್ದಾರೆ. ಎರಡು ದಿನಗಳನ್ನು ‘ಬೋಧಕೇತರ ದಿನ’ ಎಂದು ಘೋಷಿಸಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕ್ಯಾಂಪಸ್‌ನಲ್ಲಿರುವ ವಿದ್ಯಾರ್ಥಿನಿಯರ 60 ವಿಡಿಯೋಗಳು ಸೋರಿಕೆಯಾಗಿವೆ ಎಂಬ ವದಂತಿಗಳಿದ್ದರೂ, ವಿಶ್ವವಿದ್ಯಾಲಯದ ಅಧಿಕಾರಿಗಳು ಇದನ್ನು ನಿರಾಕರಿಸಿದ್ದಾರೆ.

60 ವೀಡಿಯೋಗಳು ಲೀಕ್ ಆಗಿಲ್ಲ ಮತ್ತು ಒಬ್ಬ ಹುಡುಗಿಯ ವಿಡಿಯೋ ಮಾತ್ರ ಲೀಕ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಯಾವ ಹುಡುಗಿಯೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ವಿಶ್ವವಿದ್ಯಾನಿಲಯ ಅಧಿಕಾರಿಗಳು ಸತ್ಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಇದೇ ವೇಳೆ ಪೊಲೀಸರೂ ಇದೇ ಮಾತನ್ನು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ಯಪಡಿಸಿದ್ದಾರೆ.

ಇದೇ ವೇಳೆ ವಿಶ್ವವಿದ್ಯಾನಿಲಯ ಅಧಿಕಾರಿಗಳು ತಮ್ಮನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆ ಘಟನೆ ಕುರಿತು ಪಂಜಾಬ್ ಸಿಎಂ ಭಗವಂತ್ ಮಾನ್ ತನಿಖೆಗೆ ಆದೇಶಿಸಿದ್ದಾರೆ. ಅಧಿಕಾರಿಗಳೊಂದಿಗೆ ನಿರಂತರ ಸಂವಹನದಲ್ಲಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!