ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

ದಿಗಂತ ವರದಿ ಮಂಡ್ಯ :

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತಸಂಘ ರೈತ ಬಣ ಕಾರ‌್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ.ವೃತ್ತದಲ್ಲಿ ಜಮಾಯಿಸಿದ ಕಾರ‌್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ದರ್ಶನ್ ಒಬ್ಬ ಪ್ರಭಾವಿ ನಟ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಈತ ಭಾಗಿಯಾಗಿರುವ ಕಾರಣ, ಬಲಾಢ್ಯರು, ಪ್ರಭಾವಿಗಳು, ಪ್ರಕರಣವನ್ನು ಮುಚ್ಚಿಹಾಕುವ ಸಂಶಯ ಇರುವುದರಿಂದ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ರೇಣುಕಾಸ್ವಾಮಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿದೆ. ಆತ ಯಾವುದೇ ತಪ್ಪು ಮಾಡಿದ್ದರೆ ಪೊಲೀಸರಿಗೆ ದೂರು ನೀಡಲು ಅವಕಾಶವಿತ್ತು. ಆದರೆ, ಕಾನೂನು ಕೈಗೆತ್ತಿಕೊಂಡಿರುವ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪೊಲೀಸರು ಆರೋಪಿಗಳನ್ನು ಬಂಧಿಸಿ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಮುಂದೆ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುವುದು ಸರಿಯಲ್ಲ, ಮುಖ್ಯಮಂತ್ರಿ, ಗೃಹಸಚಿವರು ಈ ನಿಟ್ಟಿನಲ್ಲಿ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!