Tuesday, February 27, 2024

ಚಿಕ್ಕಮಗಳೂರಿನಲ್ಲಿ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸ್ ಹಲ್ಲೆ ಖಂಡಿಸಿ ಹಾಗೂ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲು ಆಗ್ರಹಿಸಿ ಸರ್ವಧರ್ಮ ಸ್ವಯಂ ಸೇವಕರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಶನಿವಾರ ತಹಶೀಲ್ದಾರ ಕಚೇರಿ ಎದುರು ಸಮಾವೇಶಗೊಂಡ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವಿರುದ್ಧ ಘೋಷಿಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸರ್ವ ಧರ್ಮ ಸ್ವಯಂ ಸೇವಕರ ಸಂಸ್ಥಾಪಕ ಅಧ್ಯಕ್ಷ ಆನಂದ ದಲಬಂಜನ ಮಾತನಾಡಿ, ರಾಜ್ಯದಲ್ಲಿ ಪದೇ ಪದೇ ವಕೀಲರ ಮೇಲೆ ಹಲ್ಲೆ ನಡೆಯುತ್ತಿದೆ. ಸರ್ಕಾರ ಸಾರ್ವಜನಿಕ ರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚಿಕ್ಕಮಂಗಳೂರಿನ ವಕೀಲರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿ ತಕ್ಷಣ ಅಮಾನತ್ತು ಮಾಡಬೇಕು. ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸಬೇಕು ಎಂದರು.

ವಕೀಲರ ರಕ್ಷಣೆ ಸಲುವಾಗಿ ಸಂರಕ್ಷಣಾ ಕಾಯ್ದೆ ಜಾರಿ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಏನು ಪ್ರಯೋಜನವಾಗಿಲ್ಲ. ಶೀಘ್ರವಾಗಿ ಕಾಯ್ದೆ ಜಾರಿಗೆ ತರದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಧಾರವಾಡ ಜಿಲ್ಲಾ ಸಲಹೆಗಾರ ಗೋಪಾಲ ಧಾರವಾಡಕರ, ಅನಿಲ ಬದ್ಧಿ, ಕಿರಣ ಇರಕಲ, ಉದಯಕುಮಾರ ರೋಖಡೆ, ಗಣಪತಿ ಭೂತೆ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!