ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿರುವ ಬೆನ್ನಲ್ಲೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಕೇಳಿಬಂದಿದ್ದು, ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾದ ಘಟನೆ ನಡೆಯಿತು.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿಂದು ಪ್ರತಿಭಟನೆ ನಡೆದಿದ್ದು, ಪ್ರತ್ಯೇಕ ಧ್ವಜಾರೋಹಣಕ್ಕೂ ಮುಂದಾದರು. ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ವಶಕ್ಕೆ ಪಡೆದು, ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
#WATCH | Kalaburagi, Karnataka: Kalyana Karnataka Pratyeka Rajya Jagruti Samiti holds a protest demanding a separate state for the Kalyana Karnataka region on the Karnataka Rajyotsava. pic.twitter.com/jWRu9ey5Lq
— ANI (@ANI) November 1, 2023