‘ಕೈ’ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

 

ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ತಮ್ಮ ಬೇಡಿಕೆಗಳನ್ನ ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ತನ್ನ ಬಜೆಟ್ ಅನ್ನು ಮಂಡಿಸಿದೆ. ಇದೀಗ ರಾಜ್ಯ ಸರ್ಕಾರ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದೆ. ಆದರೆ ಬಜೆಟ್ ಗೂ ಮುನ್ನವೇ ಆಶಾ ಕಾರ್ಯಕರ್ತೆಯರ ಪ್ರತಿಭಟನೆಯ ಕಿಡಿ ಹೆಚ್ಚಾಗಿದೆ. ಮಂಗಳವಾರ ಬೆಳಗ್ಗೆಯಿಂದ ಶುರುವಾಗಿರೋ ಪ್ರತಿಭಟನೆ ಇಂದು ಕೂಡ ಮುಂದುವರೆಯಲಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಧರಣಿ ನಡೆಸುತ್ತಿದ್ದು, ತಮ್ಮ ಬೇಡಿಕೆಗಳನ್ನು ಸರ್ಕಾರ ಪೂರೈಸಲೇ ಬೇಕು ಎಂಬ ಹೋರಾಟಕ್ಕೆ ಇದೀಗ ಆಶಾ ಕಾರ್ಯಕರ್ತೆಯರು ಮುಂದಾಗಲಿದ್ದಾರೆ.

ಅಷ್ಟೇ ಅಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಆಶಾ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಪ್ರತಿಭಟನೆ ಆರಂಭವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!