ನಗರ್ತ​ಪೇಟೆಯಲ್ಲಿ ಪ್ರತಿಭಟನೆ: ಶೋಭಾ, ತೇಜಸ್ವಿ ಸೂರ್ಯ ಸಹಿತ 44 ಜನರ ವಿರುದ್ಧ FIR

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಂಗಳೂರಿನ ನಗರ್ತ​ಪೇಟೆಯಲ್ಲಿ ಪ್ರತಿಭಟನೆಗೆ ಪ್ರಚೋದನೆ ನೀಡಿದ ಆರೋಪ ಹಿನ್ನಲೆ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಮತ್ತು ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ (FIR)​ ದಾಖಲು ಮಾಡಲಾಗಿದೆ.

ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಜಂತ್ರಿ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 149, 188, 283, 290, 268ರಡಿ ಎಫ್​ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ನಗರ್ತ ಪೇಟೆಯಲ್ಲಿ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಪ್ರಕರಣ ರಾಜಕೀಯ ಸ್ವರೂಪಕ್ಕೆ ತಿರುಗಿದೆ. ಇತ್ತೀಚೆಗೆ ಸ್ಥಳಕ್ಕೆ ಭೇಟಿ ನೀಡಿದ್ದ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ನಡೆಸಿದ್ದರು. ಬಳಿಕ ನಗರ್ತ ಪೇಟೆಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ ಭೇಟಿ ನೀಡಿದ್ದು ಈ ವೇಳೆ ದೊಡ್ಡ ಹೈಡ್ರಾಮಾವೇ ನಡೆದಿತ್ತು.
ಚುನಾವಣೆ ನೀತಿ ಸಂಹಿತೆಯಿಂದಾಗಿ, ಪ್ರತಿಭಟನೆಗೆ ಅವಕಾಶ ಇಲ್ಲ. ಹೀಗಾಗಿ ಮುಖೇಶ್ ಸೇರಿದಂತೆ ಕೆಲವರನ್ನ ಪೊಲೀಸರು ವಶಕ್ಕೆ ಪಡೆಯಲು ಮುಂದಾದ್ದರು. ಇದೇ ವೇಳೆ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಆಗಮಿಸಿದ್ರು. ಈ ವೇಳೆ ಸೇರಿದ ಜನರ ಘೋಷಣೆ, ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪಕ್ಕೆ ತಿರುಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!