ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಮಾರುತ್ತಿರುವ ವೈದ್ಯರು: ಸಿಎಂ ಗೆಹ್ಲೋಟ್ ಕೆಂಡಾಮಂಡಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಸ್ಥಾನದ ಸಿಕರ್ ಜಿಲ್ಲೆಯ ಮಹಿಳಾ ವೈದ್ಯರೊಬ್ಬರು ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಗಾಡಿಯನ್ನು ರಸ್ತೆಗಿಳಿಸಿದ್ದಾರೆ. ಮೇಲಾಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೂ ಪಾನಿಪುರಿ ಗಾಡಿಯ ಪಕ್ಕದಲ್ಲಿಯೇ ಟೀ ಅಂಗಡಿ ಹಾಕಿಕೊಂಡು ಟೀ ಮಾರುತ್ತಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇಂತಹ ಘಟನೆಗಳು ಸಿಕರ್ ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜಸ್ಥಾನದ ಹಲವು ಭಾಗಗಳಲ್ಲಿ ಕಂಡುಬರುತ್ತಿವೆ. ಖಾಸಗಿ ಆಸ್ಪತ್ರೆಗಳ ಅನೇಕ ವೈದ್ಯರು ಮತ್ತು ಸಿಬ್ಬಂದಿ ರಸ್ತೆಗಳಲ್ಲಿ ಪಾನಿ ಪುರಿ ಮತ್ತು ಚಹಾವನ್ನು ಮಾರುತ್ತಿದ್ದಾರೆ. ಬದುಕಲು ಮತ್ತು ಹಣ ಸಂಪಾದಿಸಲು ಮಾಡುವ ಕೆಲಸಗಳಲ್ಲ. ಸರಕಾರ ನೀಡಿದ ಶಾಕ್ ನಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಬೀಗ ಜಡಿದಿದ್ದು, ಆಸ್ಪತ್ರೆ ವೈದ್ಯರು ಸಿಬ್ಬಂದಿಯೊಂದಿಗೆ ರಸ್ತೆಗಿಳಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸರ್ಕಾರ ಇತ್ತೀಚೆಗೆ ಹೊಸ ಮಸೂದೆಯನ್ನು ತಂದಿದೆ. ಈ ಮಸೂದೆಯ ಪ್ರಕಾರ, ಪ್ರತಿಯೊಬ್ಬ ನಾಗರಿಕರು ತುರ್ತು ಸಂದರ್ಭದಲ್ಲಿ ಯಾವುದೇ ಶುಲ್ಕವನ್ನು ಪಾವತಿಸದೆ ಯಾವುದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ. ಈ ಕಾಯ್ದೆ ವಿರೋಧಿಸಿ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಸೂದೆಯಿಂದ ಖಾಸಗಿ ಆಸ್ಪತ್ರೆಗಳ ವ್ಯವಹಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತದೆ ಎಂದು ಖಾಸಗಿ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ತಿಂಗಳ 29 ರಂದು ಬೃಹತ್ ಆಂದೋಲನಕ್ಕೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸಿದ್ಧತೆ ನಡೆಸಿದ್ದಾರೆ. ವೈದ್ಯರ ಪ್ರಸ್ತುತ ಕಳವಳದ ಬಗ್ಗೆ ಸಿಎಂ ಗೆಹ್ಲೋಟ್ ತಮ್ಮ ಕೋಪವನ್ನು ವ್ಯಕ್ತಪಡಿಸಿದರು. ಭಾನುವಾರ ಎಲ್ಲ ವೈದ್ಯರಿಗೂ ಕರ್ತವ್ಯಕ್ಕೆ ಬರುವಂತೆ ಸರ್ಕಾರ ಮಾಧ್ಯಮಗಳ ಮೂಲಕ ತಿಳಿಸಿದೆ. ಆದರೆ ವೈದ್ಯರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಆದೇಶದಲ್ಲಿ ವೈದ್ಯರ ಪ್ರತಿಭಟನೆ ಹತ್ತಿಕ್ಕಲು ಸರ್ಕಾರ ಉದ್ದೇಶಿಸಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!