ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರಿಗಾಗಿ ಕರ್ನಾಟಕದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ರಾಜ್ಯ, ಸರಕಾರ, ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ನಡೆಯುತ್ತಿದ್ದು, ಗದಗ್‌ನಲ್ಲಿ ರಾಜ್ಯದ ಸಂಸದರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ರಾಜ್ಯದಿಂದ ಆಯ್ಕೆಯಾದ 28ಸಂಸದರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಸಂಸದರು ಜೀವಂತವಾಗಿ ಇದ್ದರೂ ಸತ್ತಂತೆ ಎಂದು ಬಾಯಿ ಬಡಿದುಕೊಂಡು ಆಕ್ರೋಶ ಹೊರಹಾಕಿದರು. ಸಂಸದರ ಫೋಟೋ ಎದುರು ಮೇಣದ ಬತ್ತಿ ಹಚ್ಚಿ ಸಂತಾಪ ಸೂಚಿಸಿದರು.