ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೆಟ್ರೋಲ್ ಬೆಲೆ ಲೀಟರ್ಗೆ 3 ರೂ., ಡೀಸೆಲ್ ಬೆಲೆ 3.5 ರೂ. ಹೆಚ್ಚಳದ ಅವಿವೇಕದ ಮತ್ತು ಜನವಿರೋಧಿ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಂಡಿದೆ. ಏರಿಸಿದ ದರ ಹಿಂಪಡೆಯುವವರೆಗೆ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಘೋಷಣೆ ಮಾಡಿದ್ದಾರೆ.
ಸ್ವಾತಂತ್ರ್ಯ ಉದ್ಯಾನವನದ ಬಳಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿ, ನಾವು ವಿಪಕ್ಷವಾಗಿ ಜನರ ಪರವಾಗಿ ಧ್ವನಿ ಎತ್ತಬೇಕಿದೆ. ರಾಜ್ಯದ ರೈತರು, ಬಡವರು, ಜನಸಾಮಾನ್ಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಾವು ನೀವೆಲ್ಲರೂ ಸೇರಿ ಮಾಡಬೇಕಿದೆ ಎಂದು ತಿಳಿಸಿದರು.