ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ವೆ ನೇಮಕಾತಿ ಪರೀಕ್ಷೆಗಳಲ್ಲಿ ಲೋಪವಾಗಿದೆ ಎಂದು ಆರೋಪಿಸಿ ಬಿಹಾರದ ವಿದ್ಯಾರ್ಥಿಗಳು ಹಾಗೂ ಇತರ ರಾಜಕೀಯ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ.
ರಾಜಧಾನಿ ಪಟ್ನಾದಲ್ಲಿನ ಪ್ರತಿಭಟನಾಕಾರರು ರಸ್ತೆಗಳನ್ನು ತಡೆದು ಟೈರ್ ಸುಟ್ಟಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
2021ರಲ್ಲಿನ ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಸಿ, ವಿಪಕ್ಷಗಳು, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿವೆ.
ಈ ಇಡೀ ವಾರ ಬಿಹಾರದಲ್ಲಿ ನಡೆಯುತ್ತಿರುವ ಪ್ರಚೋದನಾಕಾರಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಈ ನಡುವೆ ಬಿಹಾರದ ಗಯಾದಲ್ಲಿ ಪ್ರತಿಭಟನಾಕಾರರು ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ ಹಚ್ಚಿರುವ ಘಟನೆಯೂ ಬುಧವಾರ ನಡೆದಿದೆ.
ಈ ವೇಳೆ ಗಯಾ ಮತ್ತು ಜೆಹಾನಾಬಾದ್, ರಾಜೇಂದ್ರ ನಗರ-ನವದೆಹಲಿ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್, ಸಂಪೂರ್ಣ ಕ್ರಾಂತಿ ಎಕ್ಸ್‌ಪ್ರೆಸ್, ಸೌತ್ ಬಿಹಾರ ಎಕ್ಸ್‌ಪ್ರೆಸ್ ಮತ್ತು ಮುಂಬೈಗೆ ತೆರಳುವ ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್ ಪ್ರೆಸ್ ರೈಲನ್ನು ತಡೆದಿದ್ದರು.
Bihar: Protesters block roads in Patna in support of bandh called by various political parties over alleged discrepancies in RRB NTPC results pic.twitter.com/BKXMH3Kaxl
— ANI (@ANI) January 28, 2022