ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್ ನಡೆಯುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಪೊರಕೆ, ಬಿಂದಿಗೆ ಹಿಡಿದು ಪ್ರತಿಭಟನಾಕಾರರು ರಸ್ತೆಯಲ್ಲಿ ಉರುಳು ಸೇವೆ ಮಾಡಿದರು. ಸಿಎಂ ಸ್ಟಾಲಿನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ಬೇಕೇ ಬೇಕು ನ್ಯಾಯ ಬೇಕು. ಅಯ್ಯಯ್ಯೋ ಅನ್ಯಾಯ ಎಂಬ ಘೋಷಣೆಗಳೊಂದಿಗೆ ಪ್ರತಿಭಟಿಸಿದರು.