ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು (ಮೇ 25) ಆರನೇ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳದ ಜಾರ್‌ಗ್ರಾಮ್‌ನ ಬಿಜೆಪಿ ಅಭ್ಯರ್ಥಿ ಪ್ರಣತ್ ತುಡು ಅವರ ಮೇಲೆ ಪಶ್ಚಿಮ ಮಿಡ್ನಾಪುರದ ಮಂಗಲಪೋಟಾದಲ್ಲಿ ಜನ ಕಲ್ಲು ತೂರಾಟ ನಡೆಸಿದ್ದಾರೆ.
ಪ್ರಣತ್ ತುಡು ಅವರನ್ನು ರಕ್ಷಿಸಲು ಭದ್ರತಾ ಪಡೆಗಳು ಶೀಲ್ಡ್ ಗಳನ್ನು ತೆಗೆದುಕೊಂಡವು. ಪ್ರತಿಭಟನಾಕಾರರು ಅಭ್ಯರ್ಥಿಯ ಮೇಲೆ ಕಲ್ಲು ತೂರಾಟ ನಡೆಸಿದ್ದು, ಮಾಧ್ಯಮದವರು, ಭದ್ರತಾ ಸಿಬ್ಬಂದಿ ಹಾಗೂ ಬಿಜೆಪಿ ಅಭ್ಯರ್ಥಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಮತಗಟ್ಟೆಯ ಹೊರಗೆ ಮತ ಚಲಾಯಿಸಲು ಕಾಯುತ್ತಿದ್ದ ಮಹಿಳೆಗೆ ಪ್ರಣತ್ ತುಡು ಅವರ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ. ಇದು ಪ್ರತಿಭಟನೆಗೆ ಕಾರಣವಾಯಿತು ಎಂದು ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.