Monday, January 30, 2023

Latest Posts

ಹಿಂದಿ ಹೇರಿಕೆ ಪ್ರತಿಭಟಿಸಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ತಮಿಳುನಾಡಿನ ವೃದ್ಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತಮಿಳುನಾಡಿನ ಸೇಲಂ ಜಿಲ್ಲೆಯ 85 ವರ್ಷದ ರೈತನೊಬ್ಬ ರಾಜ್ಯದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಡಿಎಂಕೆ ಕಚೇರಿಯ ಹೊರಗೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾರೆ. ಸೇಲಂನ ಮೆಟ್ಟೂರು ಬಳಿಯ ತಲೈಯೂರು ಎಂಬಲ್ಲಿನ ಡಿಎಂಕೆ ಕಚೇರಿ ಎದುರು ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದ ತಂಗವೇಲ್‌ ಅವರು ಗಂಭೀರ ಸುಟ್ಟ ಗಾಯಗಳೊಂದಿಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಂಗವೇಲ್ ಅವರು ಡಿಎಂಕೆಯ ಸಕ್ರಿಯ ಸದ್ಯರೂ ಆಗಿದ್ದರು. ಶಿಕ್ಷಣ ಮಾಧ್ಯಮವಾಗಿ ಹಿಂದಿಯನ್ನು ಅನುಷ್ಠಾನಗೊಳಿಸುವ ಕೇಂದ್ರ ಸರ್ಕಾರದ ಕ್ರಮದಿಂದ ಆಘಾತಗೊಂಡಿದ್ದರು.
ಆತ್ಮಹತ್ಯಾ ಮಾಡಿಕೊಳ್ಳುವ ಮುನ್ನ ತಂಗವೇಲ್ ಬ್ಯಾನರ್‌ ಒಂದನ್ನು ಹಿಡಿದುಕೊಂಡಿದ್ದು, “ಮೋದಿ ಸರ್ಕಾರ, ಕೇಂದ್ರ ಸರ್ಕಾರ ಇತ್ತ ಗಮನಿಸಿ. ನಮಗೆ ಹಿಂದಿ ಬೇಡ, ನಮ್ಮ ಮಾತೃಭಾಷೆ ತಮಿಳು. ಹಿಂದಿ ವಿದೂಷಕರ ಭಾಷೆ, ಹಿಂದಿ ಭಾಷೆ ಹೇರುವುದು ವಿದ್ಯಾರ್ಥಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಿಂದಿ ಹೇರಿಕೆ ಆದೇಶವನ್ನು ಹಿಂದೆ ಪಡೆಯಿರಿ. ಹಿಂದಿ ತೊಲಗಲಿ ಎಂದು ಬರೆದುಕೊಂಡಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಮತ್ತು ಸಿಎಂ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಪ್ರಯತ್ನಿಸಿದರೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ಪಕ್ಷವು ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.
ಕೇಂದ್ರ ಸರ್ಕಾರ ಜನರ ಭಾವನೆಗಳನ್ನು ಕಡೆಗಣಿಸಿದರೆ ಮೂಕಪ್ರೇಕ್ಷಕನಾಗಿ ಉಳಿಯುವುದಿಲ್ಲ ಎಂದು ಪಕ್ಷವು ಬೃಹತ್ ಪ್ರತಿಭಟನೆಯನ್ನೂ ನಡೆಸಿತ್ತು. ಹಿಂದಿ ಭಾಷಿಕ ರಾಜ್ಯಗಳಲ್ಲಿರುವ ಐಐಟಿಗಳಂತಹ ತಾಂತ್ರಿಕ ಮತ್ತು ತಾಂತ್ರಿಕೇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಮಾಧ್ಯಮ ಹಿಂದೂ ಮತ್ತು ದೇಶದ ಇತರ ಭಾಗಗಳಲ್ಲಿ ಇರಬೇಕು ಎಂದು ಸಂಸದೀಯ ಸಮಿತಿಯು ಶಿಫಾರಸು ಮಾಡಿದ ನಂತರ ಪ್ರತಿಭಟನೆ ಭುಗಿಲೆದ್ದಿತು. ವಿಶ್ವಸಂಸ್ಥೆಯ ಅಧಿಕೃತ ಭಾಷೆಗಳಲ್ಲಿ ಹಿಂದಿ ಒಂದಾಗಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!