ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಸಾಕಷ್ಟು ದಿನಗಳಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಯುತ್ತಿದ್ದು, ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ.
ಜಂತರ್ಮಂತರ್ನಲ್ಲಿ ಪ್ರತಿಭಟನಾನಿರತ ಕುಸ್ತಿಪಟುಗಳು ಮತ್ತು ಪೊಲೀಸ್ ಸಿಬ್ಬಂದಿ ಮಧ್ಯೆ ಕಳೆದ ರಾತ್ರಿ ಹೊಡೆದಾಟ ನಡೆದಿದ್ದು, ಇಬ್ಬರು ಕುಸ್ತಿಪಟುಗಳ ತಲೆಗೆ ಗಂಭೀರ ಗಾಯವಾಗಿದೆ. ಪೊಲೀಸರು ನಮ್ಮ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಕುಸ್ತಿಪಟುಗಳು ದೂರಿದ್ದಾರೆ.
ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ವಿರೋಧಿಸಿ ಕುಸ್ತಿಪಟುಗಳು ಏ.23ರಿಂದ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.