Wednesday, September 28, 2022

Latest Posts

ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪಂಜಾಬ್‌ನ ಖಾಸಗಿ ವಿಶ್ವವಿದ್ಯಾಲಯದಲ್ಲಿ ಭುಗಿಲೆದ್ದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಂಜಾಬ್‌ನ ಜಲಂಧರ್‌ನಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಿಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರತಿಭಟನೆ ಭುಗಿಲೆದ್ದಿದೆ. ನಿನ್ನೆ ಸಂಜೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದರು. “ವೈಯಕ್ತಿಕ ಕಾರಣಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ವಿದ್ಯಾರ್ಥಿ ಬರೆದಿರುವ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸೆಪ್ಟೆಂಬರ್ 20 ರಂದು ಸಂಜೆ 5:30 ರ ಸುಮಾರಿಗೆ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ ಬಿ. ಡಿಸೈನ್ ಪ್ರಥಮ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನಮಗೆ ಬಂತು. ನಾವು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ವೇಳೆ ಡೆತ್‌ನೋಟ್‌ ಸಿಕ್ಕಿದ್ದು, ಅದನ್ನು ವಶಪಡಿಸಿಕೊಂಡಿದ್ದೇವೆ ಎಂದು ಕಪುರ್ತಲಾ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದರು.

ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಿನ್ನೆ ರಾತ್ರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪ್ರಥಮ ವರ್ಷದ ವಿದ್ಯಾರ್ಥಿಯ ಆತ್ಮಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಘಟನೆಯ ಕುರಿತು ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಪ್ರತಿಕ್ರಿಯಿಸಿದ್ದು, ದುರದೃಷ್ಟಕರ ಘಟನೆಯಿಂದ ದುಃಖಿತವಾಗಿದೆ ಹೆಚ್ಚಿನ ತನಿಖೆಗಾಗಿ ಅಧಿಕಾರಿಗಳಿಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!