ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ಸೋರಿಕೆ: ಚಂಡೀಗಢ ವಿವಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೊಹಾಲಿಯಲ್ಲಿ ಚಂಡೀಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋಗಳು ಸೋರಿಕಾಯದ ಹಿನ್ನೆಲೆಯಲ್ಲಿ ಕ್ಯಾಂಪಸ್‌ನಾದ್ಯಂತ ಶನಿವಾರ ರಾತ್ರಿ ತೀವ್ರ ಪ್ರತಿಭಟನೆ ಭುಗಿಲೆದ್ದಿದೆ. ಹಾಸ್ಟೆಲ್‌ನಲ್ಲಿ ಸ್ನಾನ ಮಾಡುತ್ತಿದ್ದ ವಿದ್ಯಾರ್ಥಿನಿಯರ ವಿಡಿಯೋ ತೆಗೆದು ಅದೇ ಹಾಸ್ಟೆಲ್‌ನ ವಿದ್ಯಾರ್ಥಿನಿ ತನ್ನ ಬಾಯ್‌ಫ್ರೆಂಟ್‌ಗೆ ಕಳಿಸಿದ್ದಾಳೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಆತ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ. ವಿಡಿಯೋ ವೈರಲ್ ಆದ ನಂತರ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿದ್ದಾರೆ. ಆದರೆ ಆತ್ಮಹತ್ಯೆ ಯತ್ನದ ಹೇಳಿಕೆಯನ್ನು ಪೊಲೀಸರು ನಿರಾಕರಿಸಿದ್ದಾರೆ. ಈ ಸಂಬಂಧ ಓರ್ವ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ವಿದ್ಯಾರ್ಥಿನಿ ವೀಡಿಯೊ ಚಿತ್ರೀಕರಿಸಿ ವೈರಲ್‌ ಮಾಡಿದ್ದರಿಂದ ಗಂಭೀರವಾಗಿದೆ. ಈ ವಿಷಯದಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ವೈದ್ಯಕೀಯ ದಾಖಲೆಗಳ ಪ್ರಕಾರ, ಯಾರೂ ಆತ್ಮಹತ್ಯೆಗೆ ಪ್ರಯತ್ನಿಸಲಾಗಿಲ್ಲ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು ಎಂದು ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಸೋನಿ ಹೇಳಿದ್ದಾರೆ.

ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಅವರು ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಶಾಂತವಾಗಿರುವಂತೆ ಮನವಿ ಮಾಡಿದ್ದು, ತಪ್ಪಿತಸ್ಥರನ್ನು ಬಿಡುವುದಿಲ್ಲ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ ಮತ್ತು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದೆ ಎಂದು ಸಚಿವರು ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!