ಇರಾನ್ ನಲ್ಲಿ ಭುಗಿಲೆದ್ದ ಪ್ರತಿಭಟನೆ: 31 ನಾಗರಿಕರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇರಾನ್ ನಲ್ಲಿ ಹಿಜಾಬ್ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆಗಳಲ್ಲಿ ಕನಿಷ್ಠ 31 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಓಸ್ಲೋ ಮೂಲದ ಎನ್ಜಿಒ ಗುರುವಾರ ತಿಳಿಸಿದೆ.

ಇರಾನ್‍ನ ಜನರು ತಮ್ಮ ಮೂಲಭೂತ ಹಕ್ಕುಗಳು ಮತ್ತು ಮಾನವ ಘನತೆಯನ್ನ ಸಾಧಿಸಲು ಬೀದಿಗೆ ಇಳಿದಿದ್ದು,ಅವರ ಶಾಂತಿಯುತ ಪ್ರತಿಭಟನೆಗೆ ಸರ್ಕಾರವು ಗುಂಡುಗಳ ಮೂಲಕ ಸ್ಪಂದಿಸುತ್ತಿದೆ ಎಂದು ಇರಾನ್ ಮಾನವ ಹಕ್ಕುಗಳ (ಐಎಚ್‌ಆರ್) ನಿರ್ದೇಶಕ ಮಹಮೂದ್ ಅಮಿರಿ-ಮೊಗದ್ದಮ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

30ಕ್ಕೂ ಹೆಚ್ಚು ನಗರಗಳು ಮತ್ತು ಇತರ ನಗರ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿರುವುದನ್ನು ಐಎಚ್‌ಆರ್ ದೃಢಪಡಿಸಿದೆ, ಇದು ಪ್ರತಿಭಟನಾಕಾರರು ಮತ್ತು ನಾಗರಿಕ ಸಮಾಜದ ಕಾರ್ಯಕರ್ತರ ‘ಸಾಮೂಹಿಕ ಬಂಧನ’ದ ಬಗ್ಗೆ ಎಚ್ಚರಿಕೆ ನೀಡಿದೆ.

ಇರಾನ್‌ನ ಕಠಿಣ ಹಿಜಾಬ್ ಕಾನೂನುಗಳನ್ನು ಅನುಸರಿಸಲು ವಿಫಲವಾದ ಕಾರಣಕ್ಕಾಗಿ ಕಳೆದ ವಾರ ಟೆಹ್ರಾನ್‌ನಲ್ಲಿ ನೈತಿಕ ಪೊಲೀಸರಿಂದ ಬಂಧನಕ್ಕೊಳಗಾದ 22 ವರ್ಷದ ಯುವತಿ ಮಹ್ಸಾ ಅಮಿನಿ ಎಂಬುವರು ಕೋಮಾಕ್ಕೆ ಜಾರಿ ಬಳಿಕ ಸಾವನ್ನಪ್ಪಿದ್ದರು. ಆಕೆಯ ಸಾವನ್ನು ವಿರೋಧಿಸಿ ಇರಾನ್‌ನಲ್ಲಿ ಭಾರಿ ಪ್ರಮಾಣ ಪ್ರತಿಭಟನೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!