ಕೆನಡಾದಲ್ಲಿ ಲಸಿಕೆ ಕಡ್ಡಾಯ ನಿಯಮ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ: ಒಟ್ಟಾವಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲಸಿಕೆ ಕಡ್ಡಾಯ ಆದೇಶಗಳು ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಕೆನಡಾದ ರಾಜಧಾನಿ ಒಟ್ಟಾವಾದಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ಇದೀಗ ಪ್ರತಿಭಟನೆ ಭುಗಿಲೆದ್ದಿದ್ದು, ಒಗ್ಗಟ್ಟಾಗಿ ಕೆನಡಾ ನಗರದಲ್ಲಿ ದೊಡ್ಡ ಮಟ್ಟದ ಪ್ರತಿಭಟನಾ ಮೆರವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಒಟ್ಟಾವಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಪ್ರತಿಭಟನೆಗಳು ಶಾಂತ ರೀತಿಯಲ್ಲಿ ನಡೆಯುವಂತೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಿದ್ದಾರೆ. ಭಿತ್ತಿ ಪತ್ರಗಳನ್ನು ಹಿಡಿದು ಪ್ರತಿಭಟಿಸುತ್ತಿದ್ದು, ನಿರ್ಬಂಧಗಳನ್ನು ವಾಪಾಸ್ ಪಡೆಯುವವರೆಗೂ ಪ್ರತಿಭಟನೆ ಜಾರಿಯಲ್ಲಿರಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಗಡಿಯಂಚಿನ ಟ್ರಕ್ ಚಾಲಕರಿಕೆ ಕೋವಿಡ್ ಲಸಿಕೆ ಕಡ್ಡಾಯ ಎಂಬ ನಿಯಮವನ್ನು ಕೆನಡಾ ಸರ್ಕಾರ ಹೊರಡಿಸಿದ್ದು, ಇದರ ವಿರುದ್ಧ ಟೀಕೆ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!