ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ 146 ಸದಸ್ಯರುಗಳನ್ನು ಅಮಾನತುಮಾಡಲಾಗಿದೆ. ಇದನ್ನು ವಿರೋಧಿಸಿ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ I.N.D.I.A ಧರಣಿ ಆರಂಭಿಸಲಾಗಿದೆ.
ಕೈ ನಾಯಕ ರಾಹುಲ್ ಗಾಂಧಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಸಂಸತ್ತಿನಲ್ಲಿ ಪ್ರಶ್ನೆ ಕೇಳುವಂತೆಯೇ ಇಲ್ಲವಾ? ಪ್ರಶ್ನಿಸುವ ಅವಕಾಶ ಇಲ್ಲದೇ ಹೋದರೆ ಏನು ಮಾಡಬೇಕು ಎಂದು ಕೈ ನಾಯಕ ಅಧೀರ್ ರಂಜನ್ ಚೌಧರಿ ಪ್ರಶ್ನಿಸಿದ್ದಾರೆ. ನಾವು ಸಂಸತ್‌ನ ಘನತೆ ಉಳಿಸಲು ಹೋರಾಡುತ್ತಿದ್ದೇವೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.