ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ವಿಹಾರ ಮಾಡುವ ಜೈನಮುನಿಗಳಿಗೆ ಸೂಕ್ತವಾದ ಭದ್ರತೆಯನ್ನು ಕಲ್ಪಿಸುವಂತೆ ಪೊಲೀಸರಿಗೆ ರಾಜ್ಯ ಸರ್ಕಾರ ಸೂಚಿಸಿದೆ.
ಈ ಕುರಿತಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರು, ಎಲ್ಲಾ ಪೊಲೀಸ್ ಆಯುಕ್ತರು, ವಲಯ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ವಿಹಾರ ಕೈಗೊಳ್ಳುವ ಜೈನ ಧರ್ಮದ ಪರಮ ಮೂಜ್ಯನೀಯ ಮುನಿಗಳಿಗೆ, ಸೂಕ್ತವಾದ ಭದ್ರತೆ ಕಲ್ಪಿಸುವಂತೆ ಕೋರಿರುತ್ತಾರೆ.
ಆದ್ದರಿಂದ ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.