ಏಳು ದಿನಗಳಲ್ಲಿ ಮಣಿಪುರ ಹಿಂಸಾಚಾರ ಕುರಿತು ವಿಸ್ತೃತ ಮಾಹಿತಿ ನೀಡಿ: ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ (Violence) ಇನ್ನೂ ಮುಂದುವರಿದಿದ್ದು, ಈ ಹಿನ್ನೆಲೆ ಸುಪ್ರೀಂ ಕೋರ್ಟ್ (Supreme Court) ಕಳವಳ ವ್ಯಕ್ತಪಡಿಸಿದ್ದು, ಏಳು ದಿನಗಳಲ್ಲಿ ಹಿಂಸಾಚಾರವನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿಸ್ತೃತ ಮಾಹಿತಿ ನೀಡುವಂತೆ ಮಣಿಪುರ ಸರ್ಕಾರಕ್ಕೆ ಸೂಚಿಸಿದೆ.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಡಿ.ವೈ ಚಂದ್ರಚೂಡ್ (D.Y.Chandarchud) ನೇತೃತ್ವದ ತ್ರಿ ಸದಸ್ಯ ಪೀಠ, ಮಣಿಪುರದ ಪರಿಸ್ಥಿತಿ ಬಗ್ಗೆ ಮಾಹಿತಿ ಕೇಳಿತು. ಇದಕ್ಕೆ ಸರ್ಕಾರದ ಪರವಾಗಿ ಉತ್ತರಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರ ಎಲ್ಲ ರೀತಿಯ ಭದ್ರತೆಯನ್ನು ಒಗಿಸಿದೆ. ಪರಿಸ್ಥಿತಿ ಹಂತ ಹಂತವಾಗಿ ನಿಯಂತ್ರಣಕ್ಕೆ ಬರುತ್ತಿದೆ ಎಂದರು. ಇದಲ್ಲದೇ ಭದ್ರತೆಗೆ ಸಿವಿಲ್ ಪೊಲೀಸರ ಹೊರತಾಗಿ ಮಣಿಪುರ ರೈಫಲ್‌ಗಳು, ಸಿಎಪಿಎಫ್‌ನ ಕಂಪನಿಗಳು, ಸೇನೆಯ 114 ಕಾಲಂಗಳು ಮತ್ತು ಮಣಿಪುರ ಕಮಾಂಡೋಗಳನ್ನು ನಿಯೋಜಿಸಿದೆ. ನಿಧಾನವಾದರೂ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಪೀಠ , ನಿರಾಶ್ರಿತ ಮತ್ತು ಹಿಂಸಾಚಾರ ಪೀಡಿತ ಜನರಿಗೆ ಪುನರ್ವಸತಿ ಶಿಬಿರಗಳನ್ನು ನಿರ್ಮಿಸಲು ತೆಗೆದುಕೊಂಡ ಕ್ರಮಗಳು, ಭದ್ರತಾ ಪಡೆಗಳ ನಿಯೋಜನೆ ಮತ್ತು ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ವಿವರವಾಗಿ ವರದಿಯನ್ನು ಏಳು ದಿನಗಳಲ್ಲಿ ನೀಡಬೇಕು ಎಂದು ಸೂಚಿಸಿದೆ. ಜೊತೆಗೆ ಜುಲೈ 10ಕ್ಕೆ ವಿಚಾರಣೆಯನ್ನು ಮುಂದೂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!