Wednesday, August 10, 2022

Latest Posts

ಕೋವಿಡ್ ಕಾರ್ಯ, ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಶಿಕ್ಷಕರು, ಉಪನ್ಯಾಸಕರ ವಿವರ ಕೂಡಲೇ ಸಲ್ಲಿಸಿ: ಸಚಿವ ಸುರೇಶ್ ಕುಮಾರ್‌ ನಿರ್ದೇಶನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಕಾರ್ಯದಲ್ಲಿ‌ ನಿರತರಾದ ಹಾಗೂ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರು ಸಾವನ್ನಪ್ಪಿದ್ದರೆ ಕೂಡಲೇ ಶಿಕ್ಷಕವಾರು ವರದಿಯನ್ನುಮಂಡಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ನಿರ್ದೇಶನ ನೀಡಿದ್ದಾರೆ.
ಕಳೆದ ಏಪ್ರಿಲ್ 2021ರಿಂದ ಇಲ್ಲಿಯವರೆಗೆ ಕೋವಿಡ್ ಕಾರಣದಿಂದ‌ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌ ವಯೋಮಾನ ಸಹಿತವಾಗಿ ಮೃತಪಟ್ಟ ಖಚಿತ ಕಾರಣಗಳೊಂದಿಗೆ ಅತಿ ಶೀಘ್ರದಲ್ಲೇ ತಮಗೆ ವರದಿ ಮಂಡಿಸಬೇಕೆಂದು ಶಿಕ್ಷಣ‌ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಸೂಚಿಸಿರುವ ಸಚಿವರು, ಇದು ದುರದೃಷ್ಟಕರವಾದ ಸಂಗತಿಯಾಗಿದ್ದು, ಶಿಕ್ಷಕರ ಕುಟುಂಬಗಳ ಬಗ್ಗೆ ತಮ್ಮ ತೀವ್ರವಾದ ಸಂತಾಪವಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss