ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲೇ ನೀಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ಗೆ ಸಲಹೆ ನೀಡಿದ್ದಾರೆ.
ಮೋದಿ ಸರ್ಕಾರವು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಕಾಂಕ್ಷಿಗಳಿಗೆ ಸ್ಥಳೀಯ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ತಮಿಳುನಾಡಿನ ಆಕಾಂಕ್ಷಿಗಳು ತಮಿಳಿನಲ್ಲೂ ಪರೀಕ್ಷೆ ಬರೆಯಬಹುದಾಗಿದೆ.
ತಮಿಳುನಾಡಿನಲ್ಲಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಶಿಕ್ಷಣವನ್ನು ತಮಿಳಿನಲ್ಲೇ ನೀಡಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಮನವಿ ಮಾಡುತ್ತೇನೆ. ಇದರಿಂದ ನಿಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ ಎಂದರು.