Monday, October 2, 2023

Latest Posts

ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ‘ಉಚಿತ ಪ್ರಯಾಣ’ ಸೌಲಭ್ಯ ಕಲ್ಪಿಸಿ: ಶಾಸಕ ಸುನೀಲ್ ಒತ್ತಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಆದೇಶ ಸದ್ಯದಲ್ಲೇ ಜಾರಿಗೊಳ್ಳಲಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲು ಮಾಜಿ ಸಚಿವ, ಶಾಸಕ ಸುನೀಲ್ ಕುಮಾರ್ ಕಾರ್ಕಳ ಒತ್ತಾಯಿಸಿದ್ದಾರೆ.

ಮಂಗಳವಾರ ಈ ಬಗ್ಗೆ ಟ್ವಿಟ್ ಮಾಡಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ ಎಂದಿದ್ದಾರೆ. ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

https://twitter.com/karkalasunil/status/1663482540995522561?ref_src=twsrc%5Etfw%7Ctwcamp%5Etweetembed%7Ctwterm%5E1663482547270197250%7Ctwgr%5Eb4be3769075c38f0001ee27b62db4a0add530336%7Ctwcon%5Es2_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-kanowcom%2Fhomee-updates-homee%3Fmode%3Dpwaaction%3Dclick

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!