ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಕೊಡಿಸಿ: ರಾಜ್ಯ ಸರಕಾರಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದ ಮೂಲದ ವಿನಯ್ ಸೋಮಯ್ಯ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜಕೀಯ ಒತ್ತಡ ಮತ್ತು ಪೊಲೀಸ್ ಪ್ರಕರಣವೇ ಆತ್ಮಹತ್ಯೆಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರೋದು ಬಹಳ ನೋವಿನ ಸಂಗತಿ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆಯುತ್ತಿದೆ, ಸಾಕಷ್ಟು ಕಾರ್ಯಕರ್ತರ ಮೇಲೆ ವಿನಃ ಕಾರಣ ಎಫ್ಐಆರ್ ಹಾಕಿ ಕಿರುಕುಳ ನೀಡುವ ಕೆಲಸ ಸರ್ಕಾರದಿಂದ ಆಗುತ್ತಿದೆ ಎಂದರು ದೂರಿದರು.

ಗೃಹ ಸಚಿವರು ಬಿಜೆಪಿ ಕಾರ್ಯಕರ್ತ ಅನ್ನುವುದಕ್ಕಿಂತ ಹೆಚ್ಚಾಗಿ ಮಾನವಿಯತೆ ದೃಷ್ಠಿಯಿಂದ ನೋಡಬೇಕು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಹಿಂದೆ ಶಾಸಕರಿದ್ದಾರೋ? ಯಾರಿದ್ದಾರೆ ಎಂದು ತನಿಖೆ ನಡೆಸಬೇಕು. ಪ್ರಕರಣದಲ್ಲಿ ಎಷ್ಟೇ ದೊಡ್ಡ ವ್ಯಕ್ತಿ ಇದ್ದರು ಸಹ ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!