ಅಶ್ಲೀಲ ಪ್ರಚೋದನಾಕಾರಿ ಸಂದೇಶ: ಓರ್ವನ ಬಂಧನ

ಹೊಸದಿಗಂತ ವರದಿ,ಮಡಿಕೇರಿ:

ಕೋಕಿ ಅಲಿಯಾಸ್ ಶಯನ್ ( Koki @ Shayan) ಎಂಬ ಟ್ವಿಟರ್ ಖಾತೆಯಲ್ಲಿ ಅಶ್ಲೀಲ ಪ್ರಚೋದನಾಕಾರಿ ಸಂದೇಶ ಹಾಕಿದ ಆರೋಪದಡಿ ಕೊಡಗು ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ಪೊನ್ನಂಪೇಟೆ ಸಮೀಪದ ಬಾಳೆಲೆ ನಿವಾಸಿ ಕೋಕಿ ಅಲಿಯಾಸ್ ಶಯನ್ (20) ಬಂಧಿತ ಆರೋಪಿ.
ತನ್ನ ಟ್ವಿಟರ್ ಖಾತೆಯಲ್ಲಿ ‘Guys thers is an group sex event in Madikeri Club Mahindra Resort, Rs.3,500/- per person Bro with safety secrecy maintained no HF 20-35 allowed’ ಎಂಬುದಾಗಿ ಅಶ್ಲೀಲ ಪ್ರಚೋನದಕಾರಿ ಸಂದೇಶವನ್ನು ಹಾಕಲಾಗಿತ್ತೆನ್ನಲಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್’ನ ಅಧಿಕಾರಿಗಳು ಮಾಹಿತಿ ನೀಡಿದ್ದರು.
ಈ ರೀತಿಯ ಸಂದೇಶದಿಂದ ಸಾರ್ವಜನಿಕರಲ್ಲಿ ಪ್ರಚೋದನೆಗೆ ಒಳಗಾಗಿ ಸಮಾಜದ ಸ್ವಾಸ್ಥ್ಯ ಹದಗೆಡುವ ಸಾಧ್ಯತೆ ಇರುವುದರಿಂದ Koki @ Shayan ಎಂಬ ಹೆಸರಿನ ಟ್ವಿಟರ್ ಖಾತೆ ತೆರೆದು ಮೇಲ್ಕಂಡಂತೆ ಅಶ್ಲೀಲವಾಗಿ ಪೋಸ್ಟ್ ಮಾಡಿರುವ ಖಾತೆದಾರನ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಬಾಳೆಲೆ ನಿವಾಸಿಯಾದ ಶಯನ್ ಎಂಬಾತನನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯಗಳಿಂದ ಪ್ರವಾಸದ ನಿಮಿತ್ತ ಆಗಮಿಸಿ ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ/ರೆಸಾರ್ಟ್/ಲಾಡ್ಜ್’ಗಳಲ್ಲಿ ತಂಗಲು ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕುರಿತು ಪೋಸ್ಟ್ ಮಾಡುವ ಸುಳ್ಳು ಸಂದೇಶಗಳ ಕುರಿತು ಎಚ್ಚರಿಕೆ ವಹಿಸುವಂತೆ ಮತ್ತು ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವುದು ಕಂಡುಬಂದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ದೂರವಾಣಿಗೆ ಸಂಖ್ಯೆ: 08272-228300, 9480804900 ಕ್ಕೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಜಿಲ್ಲಾ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಹೋಂ ಸ್ಟೇ ರೆಸಾರ್ಟ್/ಲಾಡ್ಜ್ ಗಳಲ್ಲಿ ಸಮಾಜದ ಸ್ವಾಸ್ಥ್ಯ ಹದಗೆಡುವ ರೀತಿಯ ಯಾವುದೇ ರೀತಿಯ ಅನೈತಿಕ ಅಕ್ರಮ ಚಟುವಟಿಕೆಗಳು ನಡೆಸುತ್ತಿರುವ ಕುರಿತು ಭಾವಚಿತ್ರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆಯೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!