Monday, October 13, 2025

ಪ್ರಚೋದನಾಕಾರಿ ಭಾಷಣ: ತುಮಕೂರಿನಲ್ಲೂ ಯತ್ನಾಳ್ ವಿರುದ್ಧ FIR

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಇತ್ತೀಚಿಗೆ ಮದ್ದೂರಿಗೆ ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿಯೇ ಪ್ರಕರಣವೊಂದು ದಾಖಲಾಗಿತ್ತು. ಅದಾದ ಬೆನ್ನಲ್ಲೇ ಇದೀಗ ತುಮಕೂರಿನಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಶನಿವಾರ ತುಮಕೂರಿನಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ, ಅನ್ಯಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿ ರಘುನಾಥ್ ಎಂಬುವವರು ದೂರು ನೀಡಿದ್ದು, ದೂರಿನನ್ವಯ ತುಮಕೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

error: Content is protected !!