ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಸಚಿವ ಶಿವರಾಜ್ ತಂಗಡಗಿ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಸಚಿವ ಶಿವರಾಜ್‌ ತಂಗಡಗಿ ವಿರುದ್ಧ ದೂರು ದಾಖಲಾಗಿದೆ.

ಈಗಲೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎಂದು ಘೋಷಣೆ ಕೂಗಿದರೆ ಅವರ ಕಪಾಳಕ್ಕೆ ಹೊಡೆಯಬೇಕು ಎಂದು ತಂಗಡಗಿ ಹೇಳಿದ್ದರು.

ಯುವಕರಿಗೆ ಎರಡು ಕೋಟಿ ಉದ್ಯೋಗ ಕೊಡುತ್ತೀವಿ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಉದ್ಯೋಗ ಕೊಟ್ಟಿಲ್ಲ. ಕೊಡಿ ಎಂದರೆ ಪಕೋಡಾ ಮಾರಿ ಎನ್ನುತ್ತಾರೆ. ಈಗಲೂ ವಿದ್ಯಾರ್ಥಿಗಳು ಮೋದಿ ಮೋದಿ ಎಂದರೆ ಅವರ ಕಪಾಳಕ್ಕೆ ಬಾರಿಸಬೇಕು ಎಂದು ಆಕ್ರೋಶದ ಭಾಷಣ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!