ಪಿಎಸ್​ಐ ನೇಮಕಾತಿ ಅಕ್ರಮ | ಗೌರವಯುತವಾಗಿ ಬಂದು ಶರಣಾಗಿ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರನ್ನು ಇದುವರೆಗೂ ಬಂಧನ ಮಾಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈಗಾಗಲೇ ದಿವ್ಯಾ ಹಾಗರಗಿಗೆ ಅರೆಸ್ಟ್ ವಾರೆಂಟ್ ಹೊರಡಿಸಲಾಗಿದೆ. ಗೌರವಯುತವಾಗಿ ಬಂದು ಶರಣಾಗಬೇಕೆಂದು ಎಚ್ಚರಿಕೆ ನೀಡಿದ್ದಾರೆ.
ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ಹಣಕ್ಕಾಗಿ ಸರ್ಕಾರಿ ಉದ್ಯೋಗಗಳನ್ನು ಮಾಡುವ ಗ್ಯಾಂಗ್ ಅನ್ನು ಹೊರಗೆ ತರುತ್ತೇವೆ ಎಂದರು. ಇ
ಇದೇ ವೇಳೆ, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗದ ವಿಷಯಕ್ಕೆ ಪ್ರತಿಕ್ರಿಯಿಸಿ, ಪ್ರಿಯಾಂಕ್ ಖರ್ಗೆ ಅನೇಕ ಆರೋಪ ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಅವರು ತನಿಖೆಗೆ ಸಹಕಾರ ನೀಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. ನನ್ನ ಬಳಿ ದಾಖಲೆ ಇದೆ ಅನ್ನುತ್ತಾರೆ. ಆ ದಾಖಲೆ ಕೊಡಬಹುದಲ್ಲವೇ? ಎಂದು ಪ್ರಶ್ನಿಸಿದರು.
ಇನ್ನು ಎಡಿಜಿಪಿ ಅಮೃತ್ ಪೌಲ್ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ವರ್ಗಾವಣೆ ಸಹಜ ಪ್ರಕ್ರಿಯೆ. ಹಾಗಂತ ಅವರನ್ನು ಅಪರಾಧಿ ಅನ್ನೋದು ಸರಿಯಲ್ಲ. ತನಿಖೆಯಲ್ಲಿ ಯಾರ ಹೆಸರು ಬರುತ್ತದೆಯೋ ಅವರೇ ತಪ್ಪಿತಸ್ಥರಾಗ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!