ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿ ಆರ್.ಡಿ.ಪಾಟೀಲ್ ಗೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

ಹೊಸ ದಿಗಂತ ವರದಿ, ಕಲಬುರಗಿ:

ರಾಜ್ಯದ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಗೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಕಾಂಗ್ರೆಸ್ ವರಿಷ್ಠ ನಾಯಕರಿಗೆ ಸಹೋದರ ಮಹಾಂತೇಶ ಪಾಟೀಲ್ ಮನವಿ ಮಾಡಿದ್ದಾರೆ.

ಸೋಮವಾರ ಸಂಜೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಫಜಲಪುರ ಕ್ಷೇತ್ರದ ಟಿಕೆಟ್ ನೀಡುವಂತೆ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಆರ್.ಡಿ.ಪಾಟೀಲ್ ಸಹೋದರ ಮನವಿ ಮಾಡಿದ್ದಾರೆ.

ಒಂದು ವೇಳೆ ಟಿಕೆಟ್ ನೀಡದೆ ಹೋದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಆರ್.ಡಿ.ಪಾಟೀಲ್ ಸ್ಪರ್ಧೆ ಮಾಡಬೇಕಾಗುತ್ತದೆ. ಆರ್.ಡಿ.ಪಾಟೀಲ್ ಅಭಿಮಾನಿಗಳು, ಬೆಂಬಲಿಗರ ಒತ್ತಾಯದ ಮೇರೆಗೆ ಆರ್.ಡಿ.ಪಾಟೀಲ್ ಕಣಕ್ಕಿಳಿಯಲು ನಿಧಾ೯ರ ಮಾಡಿದ್ದು,ಮುಂದಿನ ದಿನಗಳಲ್ಲಿ ಜನರ ಬೇಕು ಬೇಡಗಳನ್ನು ಗಮನಿಸಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಸಹೋದರ ಮಹಾಂತೇಶ ಪಾಟೀಲ್ ಹೇಳಿದರು.

ಅಫಜಲಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆರ್.ಡಿ.ಪಾಟೀಲ್ ಕಣಕ್ಕೆ ಇಳಿಯಲು ನಿಧ೯ರಿಸಿದ್ದು,ಒಂದು ವೇಳೆ ಆರ್.ಡಿ.ಪಾಟೀಲ್ ಗೆ ನೀಡಿದರೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರ ಉಂಟಾಗಲಿದ್ದು ಎಂದು ಹೇಳಿದ ಅವರು,ಟಿಕೆಟ್ ನೀಡದೇ ಹೋದರೆ ಅಫಜಲಪುರ ಕ್ಷೇತ್ರದಲ್ಲಿ ಪಕ್ಷಕ್ಕೆ ಭಾರಿ ಹೊಡೆತ ಬಿಳಲಿದೆ ಎಂದು ತಿಳಿಸಿದ್ದಾರೆ.

ಕಿಂಗ್ ಪಿನ್ ಆರ್.ಡಿ.ಪಾಟೀಲ್ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!