ಪಿಎಸ್ಐ ಪರೀಕ್ಷೆ ಅಕ್ರಮ : ಕಿಂಗ್​ಪಿನ್​​ ಆರ್.ಡಿ.ಪಾಟೀಲ್ ಮತ್ತೆ ಸಿಐಡಿ ವಶಕ್ಕೆ

 ಹೊಸದಿಗಂತ ವರದಿ ಕಲಬುರಗಿ: 

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಸಿಐಡಿ ತನಿಖೆ ಮುಂದುವರಿದಿದೆ. ಪ್ರಕರಣದ ಕಿಂಗ್​ಪಿನ್ ಆರ್ ಡಿ ಪಾಟೀಲ್‌ನನ್ನು ಮತ್ತೆ ಏಳು ದಿನಗಳ ಕಾಲ ಸಿಐಡಿ ತನ್ನ ಕಸ್ಟಡಿಗೆ ಪಡೆದುಕೊಂಡಿದೆ. ಸಿಐಡಿ ಡಿವೈಎಸ್ಪಿ ವೀರೇಂದ್ರ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಬ್ಲೂಟೂತ್ ಕಿಂಗ್‌ಪಿನ್ ಆರ್‌.ಡಿ.ಪಾಟೀಲ್‌ನನ್ನು ಮೇ 30ರವರೆಗೆ ಕಸ್ಟಡಿಗೆ ಪಡೆದು ಕಲಬುರಗಿ ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.‌

ಎಂಎಸ್ಐ ಕಾಲೇಜು ಪರೀಕ್ಷಾ ಕೇಂದ್ರ ಅಕ್ರಮ ಕುರಿತಂತೆ ಕಲಬುರಗಿ ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ತನಿಖೆ ಕೈಗೊಂಡ ಸಿಐಡಿ ತಂಡ ಕಲಬುರಗಿಯ ಸಿಐಡಿ ಕಚೇರಿಯಲ್ಲಿ ಆರ್ ಡಿ ಪಾಟೀಲ್‌ನನ್ನು ತೀವ್ರ ವಿಚಾರಣೆ ನಡೆಸುತ್ತಿದೆ. ಪರೀಕ್ಷೆ ಅಕ್ರಮದಲ್ಲಿ ಇನ್ನಷ್ಟು ಅಧಿಕಾರಿಗಳು, ಮಧ್ಯವರ್ತಿಗಳು, ಅಭ್ಯರ್ಥಿಗಳ ಬಂಧನ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!