ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣ: ಅಮೃತ್ ಪಾಲ್ ವಿರುದ್ಧ 1406 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:‌

ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ‌ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಇಂದು ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ‌ ಚಾರ್ಜ್​ಶೀಟ್ ಸಲ್ಲಿಸಿದರು.

ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಪಾಲ್ ವಿರುದ್ಧ‌ 78 ದಾಖಲೆಗಳು, 38 ಸಾಕ್ಷಿಗಳು ಒಳಗೊಂಡ 1,406 ಪುಟಗಳ ಚಾರ್ಜ್​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ‌. ನೇಮಕಾತಿ ಪ್ರಕರಣದಲ್ಲಿ ಪಾಲ್ ಕೈವಾಡ, ಅಕ್ರಮ ಎಸಗಲು ಯಾವ ರೀತಿ ಸಂಚು ರೂಪಿಸಿದ್ದರು? ಅಭ್ಯರ್ಥಿಗಳಿಂದ ಪಡೆದ ಹಣ ಸೇರಿದಂತೆ ಹಲವು ಅಂಶಗಳ ಬಗ್ಗೆ ಉಲ್ಲೇಖಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!