ಹೊಸದಿಗಂತ ವರದಿ, ಕಲಬುರಗಿ
ಪಿಎಸ್ಐ ಅಕ್ರಮ ಪ್ರಕರಣದಲ್ಲಿ 15 ದಿನಗಳಿಂದ ತೆಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಮತ್ತು ಟೀಂ,ಗೆ ನಿರೀಕ್ಷಣಾ ಜಾಮೀನು ನೀಡದಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಮುಖ ತಾಣವಾದ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ, ಪ್ರಾಂಶುಪಾಲಕ ಕಾಶಿನಾಥ್ ಮತ್ತು ಮಂಜುನಾಥ ಮೇಳಕುಂದಿ, ಅರ್ಚನಾ ಹೊನಗೇರಿ, ಸುನಂದಾ ಸಿಐಡಿ ತನಿಖೆಯಿಂದ ತೆಲೆ ಮರೆಸಿಕೊಂಡಿದ್ದು, ಅಜ್ಞಾತ ಸ್ಥಳಕ್ಕೆ ಸ್ಥಳಾಂತರ ಆಗಿದ್ದಾರೆ.
ಅಜ್ಞಾತ ಸ್ಥಳದಿಂದಲೇ ದಿವ್ಯಾ ಮತ್ತು ಟೀಂ ನೀರಿಕ್ಷಣಾ ಜಾಮೀನು ಕೋರಿ ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ. ಆದರೆ ಈಗ ನೀರಿಕ್ಷಣಾ ಜಾಮೀನಿಗೆ ಸಿಐಡಿ ತಕರಾರು ಅರ್ಜಿ ಸಲ್ಲಿಸಿದೆ. ಇದು ಸಂಘಟಿಕ ಅಪರಾಧ, ಜಾಮೀನು ಕೊಟ್ಟರೆ ಸಾಕ್ಷಿ ನಾಶ ಪಡಿಸುವ ಸಾಧ್ಯತೆ ಇದೆ.
ಕಾರಣ ಈ ಐವರಿಗೆ ನಿರೀಕ್ಷಣಾ ಜಾಮೀನು ನೀಡಬೇಡಿ ಎಂದು ಕಲಬುರಗಿ,ಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ತಕರಾರು ಅರ್ಜಿ ಸಲ್ಲಿಸಿದ್ದಾರೆ.