Tuesday, May 30, 2023

Latest Posts

SHOCKING | ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಸಿಐಡಿ ತನಿಖೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಾದ್ಯಂತ ವ್ಯಾಪಕ ಸುದ್ದಿಯಾಗಿದ್ದ ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆ ಎದುರಿಸಿದ್ದ ಗಣೇಶ್ ಭಟ್ ಶವವಾಗಿ ಪತ್ತೆಯಾಗಿದ್ದಾರೆ.
ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗಣಪತಿ ಭಟ್ ಶವ ಪತ್ತೆಯಾಗಿದೆ.

ಹಗರಣದಲ್ಲಿ ಮಧ್ಯಸ್ಥಿಕೆ ವಹಿಸಿದ್ದ ಆರೋಪದಲ್ಲಿ ಗಣಪತಿ ಭಟ್ ರನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.

ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಕಾರಣ ತಿಳಿದುಬಂದಿಲ್ಲ. ಶವವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!