ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಸ್‌ಐ ಪರಶುರಾಮ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಪತ್ರ ಬರೆದಿದ್ದಾರೆ.
ಕೇಂದ್ರ ಸಚಿವರ ಪತ್ರದ ಬೆನ್ನಲ್ಲೇ ಕೇಂದ್ರ ಗೃಹ ಇಲಾಖೆ, ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಪ್ರಕರಣವನ್ನು ಪರಿಶೀಲಿಸಿ, ಮಾಹಿತಿ ನೀಡುವಂತೆ ಸೂಚನೆ ನೀಡಿದೆ.
ಈಚೆಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಪರಶುರಾಮ್ ಸಂಕಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಪ್ರಕರಣದಲ್ಲಿ ಶಾಸಕ ಚನ್ನಾರೆಡ್ಡಿ ಪಾಟೀಲ ಮತ್ತು ಅವರ ಪುತ್ರ ಪಂಪನಗೌಡ ಪುತ್ರನ ಹೆಸರು ಕೇಳಿಬಂದಿತ್ತು. ಶಾಸಕರ ರಾಜೀನಾಮೆ ಮತ್ತು ಇಬ್ಬರ ಬಂಧನಕ್ಕೆ ಆಗ್ರಹಿಸಿ ಜನರು ಪ್ರತಿಭಟಿಸಿದ್ದರು.